ಬ್ರಹ್ಮಾವರ ತಾಲೂಕು 27 ಗ್ರಾಪಂಗಳ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ

Update: 2021-01-18 14:37 GMT

ಬ್ರಹ್ಮಾವರ, ಜ.18: ಬ್ರಹ್ಮಾವರ ತಾಲೂಕು ವ್ಯಾಪ್ತಿಯ 27 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಇಂದು ಬ್ರಹ್ಮಾವರ ಬಂಟರ ಭವನದಲ್ಲಿ ಗ್ರಾಪಂ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಮೀಸಲಿರಿಸಿ ಹಂಚಿಕೆ ಮಾಡಲಾಗಿದೆ.

2020ನೇ ಸಾಲಿನ ಚುನಾವಣೆ ಮುಗಿದ ಗ್ರಾಪಂಗಳಿಗೆ 30 ತಿಂಗಳ ಮೊದಲ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ ಇಂತಿದೆ. ಕೋಟತಟ್ಟು: ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.

ಕೋಟ: ಅಧ್ಯಕ್ಷ-ಹಿಂದುಳಿದವರ್ಗ ‘ಅ’, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಪಾಂಡೇಶ್ವರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ. ಕೋಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಬ.

ಐರೋಡಿ: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಬಾರ್ಕೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿಗವರ್ಗ ‘ಅ’ ಮಹಿಳೆ. ವಡ್ಡರ್ಸೆ: ಅಧ್ಯಕ್ಷ- ಹಿಂದುಳಿದವರ್ಗ ‘ಅ’ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಯಡ್ತಾಡಿ: ಅಧ್ಯಕ್ಷ-ಹಿಂದುಳಿದವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ. ಶಿರಿಯಾರ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಬಿಲ್ಲಾಡಿ: ಅಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.

ಆವರ್ಸೆ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ. ಹೆಗ್ಗುಂಜೆ: ಅಧ್ಯಕ್ಷ-ಸಾಮನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. ಹನೇಹಳ್ಳಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದವರ್ಗ ‘ಅ’ ಮಹಿಳೆ.

ಕಾಡೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದವರ್ಗ ‘ಅ’ ಮಹಿಳೆ. ನಾಲ್ಕೂರು: ಅಧ್ಯಕ್ಷ-ಹಿಂದುಳಿದವರ್ಗ ‘ಅ’, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ. ಕೊಕ್ಕರ್ಣೆ: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ.

ಚೇರ್ಕಾಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. 38 ಕಳತ್ತೂರು: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ. ಕರ್ಜೆ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ. ಆರೂರು: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಉಪ್ಪೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ. ವಾರಂಬಳ್ಳಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿಗ ವರ್ಗ ಅ. ಹಾರಾಡಿ: ಅಧ್ಯಕ್ಷ-ಹಿಂದುಳಿದವರ್ಗ ಬೆ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಚಾಂತಾರು: ಅಧ್ಯಕ್ಷ-ಹಿಂದುಳಿದವರ್ಗ ಅ ಮಹಿಳೆ, ಉಪಾಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ.

ಹಾವಂಜೆ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಹಂದಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ. ನೀಲಾವರ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಧಾಶಿವ ಪ್ರಭು, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ ಹಾಗೂ ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News