​ದ.ಕ.ಜಿಲ್ಲೆ : 13 ಮಂದಿಗೆ ಕೊರೋನ ಪಾಸಿಟಿವ್

Update: 2021-01-18 15:32 GMT

ಮಂಗಳೂರು, ಜ.18: ದ.ಕ.ಜಿಲ್ಲೆಯಲ್ಲಿ ಸೋಮವಾರ 13 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 33,438 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ.

ಸೋಮವಾರ 43 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 32,378 ಮಂದಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಜಿಲ್ಲೆಯಲ್ಲಿ 5,46,161 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 5,12,723 ಮಂದಿಯ ವರದಿ ನೆಗೆಟಿವ್ ಮತ್ತು 33,438 ಮಂದಿಯ ವರದಿ ಪಾಸಿಟಿವ್ ಆಗಿದೆ. ಅಲ್ಲದೆ 323 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 737 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 25,154 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 26,48,270 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News