ಪ್ರೀತಿ, ಸಹಬಾಳ್ವೆ, ಮನುಷ್ಯತ್ವ ರೂಢಿಸುವಲ್ಲಿ ಧರ್ಮದ ಪಾತ್ರ ಮುಖ್ಯ: ಯಡಿಯೂರಪ್ಪ

Update: 2021-01-18 16:58 GMT

ಉಡುಪಿ, ಜ.18: ಮನುಷ್ಯರನ್ನು ಧರ್ಮಮಾರ್ಗದಲ್ಲಿ ನಡೆಸಿ ಸಮಾಜವನ್ನು ಸುಸ್ಥಿತಿಯಲ್ಲಿಡಲು ಧರ್ಮ ಅತ್ಯಗತ್ಯ. ದಯವೇ ಧರ್ಮದ ಮೂಲವಾಗಿ ರುವುದರಿಂದ ಪರಸ್ಪರರಲ್ಲಿ ಪ್ರೀತಿ, ಸಹಬಾಳ್ವೆ ಹಾಗೂ ಮನುಷ್ಯತ್ವವನ್ನು ರೂಢಿ ಸುವಲ್ಲಿ ಮಹತ್ವದ ಪಾತ್ರ ವನ್ನು ಹೊಂದಿದೆ ಎಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕರಂಬಳ್ಳಿ ಶ್ರೀವೇಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನಡೆದ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಧರ್ಮಸಭೆಯಲ್ಲಿ ಭಾಗವಹಿಸಿ ಅವರು ಮಾತ ನಾಡುತಿದ್ದರು.

ದೇವಸ್ಥಾನದಲ್ಲಿ ಮಾಜಿ ಸಚಿವ ಡಾ.ವಿ.ಎಸ್.ಆಚಾರ್ಯರ ಹೆಸರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಾರ್ಥಿಗಳ ಅನ್ನಛತ್ರಕ್ಕೆ ವಾರದೊಳಗೆ ನಾಲ್ಕು ಕೋಟಿ ರೂ. ಅನುದಾನವನ್ನು ಮಂಜೂರು ಾಡಲಾಗುವುದು ಎಂದು ತಿಳಿಸಿದರು.

ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಾಸುದೇವ ತಂತ್ರಿ ಮತ್ತು ಗುರುರಾಜ ಭಟ್ ಅವರನ್ನು ಸನ್ಮಾನಿಸಲಾಯಿತು.

ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಕೋಟ ಶ್ರೀನಿ ವಾಸ ಪೂಜಾರಿ, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಜೀವರಾಜ್, ಸಂಸದರಾದ ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಮತ್ತು ಶಾಸಕ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News