×
Ad

ವಿವಿಧ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿಗೆ ಕ್ಯಾಂಪ್ಕೊ ಮನವಿ

Update: 2021-01-18 22:51 IST

ಮಂಗಳೂರು, ಜ.18: ಉಡುಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರನ್ನು ಸೋಮವಾರ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿದ ಕ್ಯಾಂಪ್ಕೊ ನೂತನ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಲ್ಪಿಸಲು ಮನವಿ ಮಾಡಿದರು.

ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸುವ ಉದ್ದೇಶದಿಂದ ನಡೆಸುವ ಕಾನೂನುಬಾಹಿರ ಚಟುವಟಿಕೆಗಳು, ಆಮದು ನಿಯಂತ್ರಣ, ಹಳದಿ ರೋಗದ ಬಗ್ಗೆ ವೈಜ್ಞಾನಿಕ ಅಧ್ಯಯನದ ಅಗತ್ಯತೆ, ವಿವಿಧ ಎಪಿಎಂಸಿ ಆವರಣಗಳಲ್ಲಿನ ನಿವೇಶನ ಹಂಚಿಕೆಯಲ್ಲುಂಟಾಗಿರುವ ಸಮಸ್ಯೆಗಳ ಬಗ್ಗೆ ಮತ್ತು ಸಂಸ್ಥೆಯ ಪವನ ವಿದ್ಯುತ್ ಉತ್ಪಾದನಾ ಘಟಕದ ವೀಲಿಂಗ್ ಆ್ಯಂಡ್ ಬ್ಯಾಂಕಿಂಗ್ ವ್ಯವಸ್ಥೆಯ ಮುಂದುವರಿಕೆಯ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭ ಕ್ಯಾಂಪ್ಕೊ ಹಿರಿಯ ನಿರ್ದೇಶಕ ಕಾರ್ಕಳದ ದಯಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News