ಗುಜರಾತ್ ‌: ಟ್ರಕ್‌ ಹರಿದು ಕನಿಷ್ಠ 15 ವಲಸೆ ಕಾರ್ಮಿಕರು ಮೃತ್ಯು

Update: 2021-01-19 04:30 GMT

ಸೂರತ್ ‌: ಫೂಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಟ್ರಕ್‌ ಹರಿದ ಪರಿಣಾಮ ಕನಿಷ್ಠ 15 ಮಂದಿ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಗುಜರಾತ್‌ನ ಕೋಸಂಬಾದಲ್ಲಿ ನಡೆದಿದೆ.

'ಮೃತಪಟ್ಟಿರುವ ಎಲ್ಲರೂ ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರು' ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಕಾರ್ಮಿಕರು ಫೂಟ್‌ಪಾತ್‌ ಮೇಲೆ ನಿದ್ರೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಕಾರ್ಮಿಕರೆಲ್ಲರೂ ರಾಜಸ್ಥಾನದ ಬಾಂಸ್ವಾಡಾ ಮೂಲದವರೆಂದು ಹೇಳಲಾಗುತ್ತಿದೆ.

ಟ್ರ್ಯಾಕ್ಟರ್‌ಗೆ ಢಿಕ್ಕಿಯಾದ ಟ್ರಕ್‌, ಚಾಲಕನ ನಿಯಂತ್ರಣಕ್ಕೆ ಸಿಗದೆ ಫೂಟ್‌ಪಾತ್‌ ಮೇಲೆ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಮೃತಪಟ್ಟಿದ್ದು, ಗಾಯಗೊಂಡಿರುವ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News