ಸಹೋದರಿಯರಿಗೆ ಲೈಂಗಿಕ ಕಿರುಕುಳ ಆರೋಪ : ಪೊಕ್ಸೊ ಪ್ರಕರಣ ದಾಖಲು

Update: 2021-01-19 07:35 GMT

ಉಳ್ಳಾಲ : ಉಳ್ಳಾಲದ ಒಂಭತ್ತುಕೆರೆಯಲ್ಲಿನ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಿದ್ದೀಕ್ ಉಳ್ಳಾಲ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಣಾಜೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಮಹಿಳೆ ಕೇರಳ ಮೂಲದ ಯುವಕನನ್ನು ಸುಮಾರು 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ 9 ಮತ್ತು 6 ವರ್ಷದ ಇಬ್ಬರು ಹೆಣ್ಮಕ್ಕಳಿದ್ದರು. ಈ ಮಧ್ಯೆ ಪ್ರೀತಿಸಿದ ಯುವಕನು ಬಳಿಕ ಆಕೆಗೆ ಕೈ ಕೊಟ್ಟಿದ್ದ ಎನ್ನಲಾಗಿದ್ದು, ಆಕೆ ಉಳ್ಳಾಲದ ಒಂಭತ್ತುಕೆರೆಯಲ್ಲಿ ಮಕ್ಕಳ ಜೊತೆ ವಾಸವಾಗಿದ್ದರು.

ಈ ಮಧ್ಯೆ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡ ಸಿದ್ದೀಕ್ ಆಕೆಯ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಮಾಹಿತಿ ಅರಿತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News