ಬಾಲಕಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ : 2 ಪ್ರಕರಣ ದಾಖಲು

Update: 2021-01-19 11:12 GMT

ಮಂಗಳೂರು, ಜ.19: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜ. 16ರಂದು ದಾಖಲಾಗಿರುವ ತಾಯಿ ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ತಾಯಿ ಹಾಗೂ ಮಕ್ಕಳ ಮೇಲೆ ಲೈಗಿಂಕ ಹಲ್ಲೆ ನಡೆಸಿರುವ ದೂರಿನ ಜತೆಗೆ, ಆರೋಪಿಗೆ ಬೆಂಬಲ ವ್ಯಕ್ತಪಡಿಸಿ ಈ ತಾಯಿ ಮಕ್ಕಳಿಗೆ ಬೆದರಿಕೆ ಒಡ್ಡಿರುವ ಕುರಿತಂತೆಯೂ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಲೆ ಮರೆಸಿಕೊಂಡಿದ್ದು, ಎರಡು ತಂಡಗಳಲ್ಲಿ ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿ ಹೊರ ರಾಜ್ಯಕ್ಕೆ ಹೋಗಿರುವ ಶಂಕೆ ಇರುವ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News