ಸಿದ್ದರಾಮಯ್ಯ ಜ್ಯೋತಿಷ್ಯ ಕಲಿಯುತ್ತಿರಬೇಕು : ಸಚಿವ ಎಸ್.ಟಿ.ಸೋಮಶೇಖರ್

Update: 2021-01-19 12:16 GMT

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದಾರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು.

ನಗರದ ವಿಜಯನಗರ 4ನೇ ಹಂತದಲ್ಲಿ ಮುಡಾ ವ್ಯಾಪ್ತಿಗೆ ಬರುವ ಸ್ಥಳ ಪರಿಶೀಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News