ಭದ್ರಾವತಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಬಂಧನ

Update: 2021-01-19 12:10 GMT

ಶಿವಮೊಗ್ಗ: ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಛೇರಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವೇಣು(36) ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲಕರೊಬ್ಬರ ಬಳಿ ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ ಲಂಚ ಕೇಳಿದ್ದ ಎಂದು ಆರೋಪಿಸಲಾಗಿದೆ. ಇಂದು 2,500 ರೂ. ಹಣ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿ ಬಂಧಿಸಲಾಗಿದೆ.

ಎಸಿಬಿ ಡಿವೈಎಸ್‌ಪಿ ಲೋಕೇಶ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ್, ರಘುನಾಯ್ಕ್, ನಾಗರಾಜ್, ಸುರೇಂದ್ರ, ಹರೀಶ್, ಯೋಗೇಶ್, ಶ್ರೀನಿವಾಸ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News