ಮಾನಸಿಕ ದೌರ್ಬಲ್ಯದ ಮನಸ್ಥಿತಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ಬಿ.ಸಿ.ಪಾಟೀಲ್

Update: 2021-01-19 13:11 GMT

ಮೈಸೂರು,ಜ.19: ದೇಶದಲ್ಲಿ  ರೈತರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ, ಉದ್ಯಮಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಕೃಷಿ ನೀತಿಯಿಂದ ಯಾರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ರೈತರು ಮಾನಸಿಕ ದೌರ್ಬಲ್ಯದ ಮನಸ್ಥಿತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೇವಲ ರೈತರಷ್ಟೇ ಆತ್ಮಹತ್ಯೆ ಮಾಡಕೊಳ್ಳುತ್ತಿಲ್ಲ ಉದ್ಯಮಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

ರೈತರ ಆತ್ಮಹತ್ಯೆ ಆಗಬಾರದು ಎಂದು ಹಲವಾರು ಕಾರ್ಯಕ್ರಮಗಳನ್ನು ರೂಪಸಿಲಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಸಾಂತ್ವನ ಹೇಳಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ, ರೈತರ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ. ಅದಕ್ಕೆ ಪರ್ಯಾಯ ಕಾರ್ಯಕ್ರಮ ರೂಪಿಸಬೇಕು. ನಂತರ ತರಬೇತಿ ನೀಡಬೇಕು ಎಂದು ಹೇಳಿದರು.

ಈಗಾಗಲೇ 'ಒಂದು ಜಿಲ್ಲೆ, ಒಂದು ಬೆಳೆ' ಎಂಬುದನ್ನು ಗುರುತಿಸಿ ಪ್ರತಿ ವಾರ 50 ರೈತರಿಗೆ ಆಹಾರ ಸಂಸ್ಕರಣೆ ವಿಷಯದಲ್ಲಿ ತರಬೇತಿ ನೀಡಲು ಇಲ್ಲಿನ ಸಿಎಫ್‍ಟಿಆರ್‍ಐ ಜತೆ ಒಪ್ಪಂದ ಮಾಡಿಕೊಂಡಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News