ಉಡುಪಿ ಜಿಲ್ಲೆಯ ನಾಲ್ವರಲ್ಲಿ ಕೋವಿಡ್ ಸೋಂಕು ಪತ್ತೆ

Update: 2021-01-19 13:40 GMT

ಉಡುಪಿ, ಜ.19: ಮಂಗಳವಾರ ಉಡುಪಿ ಜಿಲ್ಲೆಯ ನಾಲ್ವರು ಪುರುಷರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಮೂವರು ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 27 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ತಲಾ ಇಬ್ಬರು ಉಡುಪಿ ಹಾಗೂ ಕುಂದಾಪುರ ತಾಲೂಕಿನವರಾಗಿದ್ದು, ಎಲ್ಲರೂ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸೋಮವಾರ ಮೂವರು ಚಿಕಿತ್ಸೆ ಬಳಿಕ ಸೋಂಕಿನಿಂದ ಮುಕ್ತಿ ಪಡೆದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಮುಕ್ತಿ ಪಡೆದವರ ಒಟ್ಟು ಸಂಖ್ಯೆ ಈಗ 23,011ಕ್ಕೇರಿದೆ.

1242 ಮಂದಿ ನೆಗೆಟಿವ್: ಸೋಮವಾರ ಜಿಲ್ಲೆಯ 1245 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1242 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಮೂವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಈ ಮೂಲಕ ಇದುವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,227 ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,24,053 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,00,826 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,227 ಮಂದಿ ಪಾಸಿಟಿವ್ ಬಂದಿದ್ದರೆ, 23,011 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಕೋವಿಡ್‌ಗೆ ಮೃತರ ಸಂಖ್ಯೆ 189 ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News