ನೂತನ ಸಚಿವರಿಗೆ ಗುರುವಾರ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ

Update: 2021-01-19 13:48 GMT

ಬೆಂಗಳೂರು, ಜ.19: ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ 7 ಮಂದಿ ನೂತನ ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಬಂಧ ನಾಳೆ ಹಿರಿಯ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ರೇಣುಕಾಚಾರ್ಯ ಹೊಸದಿಲ್ಲಿಗೆ ಹೋಗಿರುವ ವಿಚಾರ ಗೊತ್ತಿದೆ. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಲ್ಲಿಂದ ಬಂದ ಬಳಿಕ ನನ್ನನ್ನು ಅವರು ಭೇಟಿಯಾಗಲಿದ್ದಾರೆ ಎಂದು ಅವರು ಹೇಳಿದರು. 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೊಬೈಲ್ ಆ್ಯಪ್ ಬಿಡುಗಡೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೊಬೈಲ್ ಆ್ಯಪ್, ಪರಿಸರ ವಾಹಿನಿ ಪತ್ರಿಕೆ ಹಾಗೂ ಜಿ.ಪಿ.ಎಸ್ ಟ್ರಾಕಿಂಗ್ ಸಿಸ್ಟಂ ಅನ್ನು ಬಿಡುಗಡೆ ಮಾಡಿದರು. ಅರಣ್ಯ ಸಚಿವ ಆನಂದ್ ಸಿಂಗ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಿಜಯ್‍ಕುಮಾರ್ ಗೋಗಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News