ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Update: 2021-01-19 14:56 GMT

ಉಡುಪಿ, ಜ.19: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲ ಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2020ರ ಜ.1ರಿಂದ ಡಿ.31ರೊಳಗೆ ಪ್ರಕಟಿಸಿ ರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೂಡಲಪಾಯ ಹಾಗೂ ಪಡುವಲಪಾಯ(ಕರಾವಳಿ ಯಕ್ಷಗಾನ) ಈ ಎರಡು ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರ ಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನವನ್ನು ನೀಡಲಾಗುವುದು.

ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಅಥವಾ ಅಕಾಡೆಮಿಯಿಂದ ಪಡೆಯ ಬಹುದಾಗಿದೆ. ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಫೆ.10ರ ಒಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News