ಪಡಿತರ ಚೀಟಿದಾರರು: ದಾಖಲೆ ವಿವರ ನೀಡಲು ಸೂಚನೆ

Update: 2021-01-19 16:54 GMT

ಮಂಗಳೂರು, ಜ.19: ಮೊದಲ ಹಂತದಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಮರು ಪ್ರಾರಂಭಿಸಲು ರಾಜ್ಯ ಸರಕಾರ ಆದೇಶಿಸಿದೆ.

ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವಿವರ, ಮೊಬೈಲ್ ಸಂಖ್ಯೆ ನೀಡಬೇಕಿದೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣಪತ್ರ (ಇದ್ದಲ್ಲಿ), ಆದಾಯ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳೊಂದಿಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು.

2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ಜಿಎಸ್‌ಸಿ(ತಿದ್ದುಪಡಿ) ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಮಾಡಲೇ ಬೇಕಾಗಿರುತ್ತದೆ. ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ಉಚಿತವಾಗಿ ಮಾಡಲು ಕ್ರಮ ವಹಿಸಲಾಗಿದೆ.ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದಲ್ಲಿ ಅಥವಾ ದೂರುಗಳಿದ್ದರೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಅಥವಾ ಸಹಾಯಕ ನಿರ್ದೇಶಕರು, ಅನೌಪಚಾರಿಕ ಪಡಿತರ ಅವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News