ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Update: 2021-01-19 17:04 GMT

ಮಂಗಳೂರು, ಜ.19: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಸುವ ನಿಟ್ಟಿನಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಜ.27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಈ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲ್ಯೂಡಿ ಕಟ್ಟಡ, ಮಂಗಳೂರು-575001 ಅಥವಾ ದೂ.ಸಂಖ್ಯೆ: 0824-2424254ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News