×
Ad

ದ.ಕ.ಜಿಲ್ಲೆ : ಕೋವಿಡ್ ಲಸಿಕೆ ವಿತರಣೆಯಲ್ಲಿ ಶೇ.58.44 ಸಾಧನೆ

Update: 2021-01-19 22:38 IST

ಮಂಗಳೂರು, ಜ.19: ದ.ಕ.ಜಿಲ್ಲೆಯಲ್ಲಿ ಮೊದಲ ಹಂತದ ಲಸಿಕೆ ನೀಡುವ ಅಭಿಯಾನ ಯಶಸ್ವಿಯಾಗುತ್ತಿದ್ದು, ಮಂಗಳವಾರ 734 ಮಂದಿಗೆ ಲಸಿಕೆ ನೀಡಲಾಗಿದೆ. ಆ ಮೂಲಕ ಶೇ.58.44 ಸಾಧನೆಯಾಗಿದೆ.

ಮಂಗಳವಾರ 1256 ಮಂದಿಗೆ ಲಸಿಕೆ ವಿತರಿಸುವ ಗುರಿ ಹಾಕಲಾಗಿತ್ತು. ಅದರಂತೆ 15 ಕಡೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನಡೆದಿದೆ. ಆ ಪೈಕಿ ಎಜೆ ಆಸ್ಪತ್ರೆಯಲ್ಲಿ 72, ಅಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 40, ಕಣಚೂರು ಆಸ್ಪತ್ರೆ ಯಲ್ಲಿ 35, ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 17, ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ 135, ಆಳ್ವಾಸ್ ಹೆಲ್ತ್ ಸೆಂಟರ್ 53, ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 64, ಸಜಿಪನಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 42, ಶ್ರೀನಿವಾಸ ಆಸ್ಪತ್ರೆಯಲ್ಲಿ 75, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 49, ಎಸ್‌ಡಿಎಂ ಆಸ್ಪತ್ರೆಯಲ್ಲಿ 122 ಮಂದಿಗೆ ಲಸಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News