ಗೋರಕ್ಷಕರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಕ್ರಮ : ಪ್ರಭು ವಿ.ಚವ್ಹಾಣ್

Update: 2021-01-19 17:15 GMT

ಮಂಗಳೂರು, ಜ.19: ಗೋರಕ್ಷಕರ ಮೇಲೆ ದಾಖಲಾದ ಪ್ರಕರಣಗಳನ್ನು ವಾಪಾಸು ತೆಗೆದು ಕೊಳ್ಳುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಸಮಾಲೋಚನೆ ನಡೆಸುವು ದಾಗಿ ಹಾಗೂ ಗೋ ರಕ್ಷಣೆಗಾಗಿ ಪ್ರತಿ ತಾಲೂಕಿನಲ್ಲಿ ಸರಕಾರಿ ಗೋ ಶಾಲೆ ತೆರೆಯಲು ಕ್ರಮ ಕೈಗೊಳ್ಳುವುದಾಗಿ  ಸಚಿವ ಪ್ರಭು ವಿ ಚವ್ಹಾಣ್  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಅವರು ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಈ ಹಿಂದೆ ಗೋ ಸಾಗಾಟದ ಸಂದರ್ಭದಲ್ಲಿ ಗೋ ರಕ್ಷಕರು ಸಾಗಾಟಗಾರರನ್ನು ತಡೆದ ಸಂದರ್ಭದಲ್ಲಿ ಗೋ ರಕ್ಷಕರ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ. ಅವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಸಾಕಷ್ಟು ಮನವಿಗಳು ಬಂದಿರುತ್ತವೆ. ಈ ಬಗ್ಗೆ ಮುಖ್ಯ ಮಂತ್ರಿ ಜೊತೆ ಸಮಾಲೋಚಿಸಿ ಪ್ರಕರಣಗ ಳನ್ನು ಹಿಂದಕ್ಕೆ ಪಡೆಯಲು ಕ್ರಮ ಕೈಗೊಳ್ಳ ಲಾಗುವುದು. ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದ ಲ್ಲಿ ಕಟ್ಟು ನಿಟ್ಟಾಗಿ ಜಾರಿ ಮಾಡಲು ರಾಜ್ಯದ ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಲಾ ಗಿದೆ .ಇದೇ ಸಂದರ್ಭದಲ್ಲಿ ರೈತರಿಗೆ ಕೃಷಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈ ಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಪ್ರಭು ವಿ.ಚವ್ಹಾಣ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ವೇದ ವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News