ಜಾನುವಾರು ತುರ್ತು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಸೇವೆಗೆ ಚಾಲನೆ

Update: 2021-01-19 17:40 GMT

ಮಂಗಳೂರು,ಜ.19: ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಸುಸಜ್ಜಿತ ಸಂಚಾರಿ ಪಶುಚಿಕಿತ್ಸಾ ಆಂಬುಲೆನ್ಸ್ ಪಾಹನಗಳ ಮೂಲಕ ರೈತರ ಮನೆ ಬಾಗಿಲಲ್ಲಿ ರೋಗಗ್ರಸ್ತ ಜಾನುವಾರು ಗಳಿಗೆ ತಜ್ಞ ಪಶುವೈದ್ಯಕೀಯ ಸೇವೆ ನೀಡಲು ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿಂದು ಸಚಿವ ಪ್ರಭು ವಿ ಚವ್ಹಾಣ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ರೂ.2 ಕೋಟಿ ವೆಚ್ಚದಲ್ಲಿ 15 ಸುಸಜ್ಜಿತ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನಗಳನ್ನು ಬೀದರ್, ರಾಯಚೂರು, ಕಲಬುರ್ಗಿ, ಧಾರವಾಡ, ಬಿಜಾಪುರ, ಬೆಳಗಾಂ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪಶುವೈದ್ಯಕೀಯ ಪಾಲಿಕ್ಲಿನಿಕ್‌ ಗಳಿಗೆ ನೀಡಲಾಗುವುದು ಮುಂದಿನ  ದಿನಗಳಲ್ಲಿ ರಾಜ್ಯದ ಉಳಿದ 15ಜಿಲ್ಲೆಗಳಿಗೂ ಅಂಬ್ಯುಲೆನ್ಸ್ ಸೇವೆ ನೀಡಲಾಗುವುದು ಎಂದು ಸಚಿವ‌ ಚವ್ಹಾಣ್ ತಿಳಿಸಿದ್ದಾರೆ.

*ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿಂದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆಗಾಗಿ ಅವಕಾಶ, 250 ಲೀಟರ್‌ ಸಾಮರ್ಥ್ಯದ ನೀರಿನ ಟ್ಯಾಂಕ್‌, 200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, ಎಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳು, ವಾಶ್ ಬೇಸಿನ್ ಒಳಗೊಂಡಿದೆ. ತುರ್ತು ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆಗೆ ರೈತರಿಗೆ ನೆರವಾಗಲಿದೆ. ಪಶುಪಾಲಕರ ಸಹಾಯ‌ವಾಣಿ 1962 ಸಂಯೋಜಿಸಿ ಅವಶ್ಯಕ ಮತ್ತು ತುರ್ತು ಸೇವೆ ನೀಡಲು ರೈತರು ಬಳಸಿಕೊಳ್ಳ ಬಹುದು ಎಂದು ಸಚಿವ ಪ್ರಭು ಬಿ ಚವ್ಹಾಣ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News