ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-01-19 18:09 GMT

ಬೆಂಗಳೂರು, ಜ.19: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಯುವ ವಿಜ್ಞಾನಿ ಪ್ರಶಸ್ತಿಗಾಗಿ ನಡೆಯುವ ಸ್ಪರ್ಧೆಗೆ 9ರಿಂದ 12ನೇ ತರಗತಿಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪರಿಷತ್, ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ವಿಧಾನದ ಬಗ್ಗೆ ಮನವರಿಕೆ ಮಾಡುವುದು, ಭವಿಷ್ಯದ ವಿಜ್ಞಾನಿಗಳನ್ನು ರೂಪಿಸುವುದು ಹಾಗೂ ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯ, ರಾಷ್ಟ್ರದ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದಕ್ಕಾಗಿ ಈ ಯೋಜನೆಯನ್ನು ಆಯೋಜಿಸಲಾಗಿದೆ.

ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಜ.31ರ ಒಳಗಾಗಿ ತಮ್ಮ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿಗೆ ಹಾಗೂ ಅರ್ಜಿಯ ಒಂದು ಪ್ರತಿಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೇಂದ್ರ ಕಚೇರಿಗೆ ಸಲ್ಲಿಸಬೇಕು. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.9902997044, 9483549159ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News