ಬೆಂಗಳೂರು: ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನಾ ರ‍್ಯಾಲಿ ಆರಂಭ

Update: 2021-01-20 06:37 GMT

ಬೆಂಗಳೂರು, ಜ.20: ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ರ್ಯಾಲಿ ಆರಂಭಗೊಂಡಿದೆ.

ರಾಜಭವನ ಮುತ್ತಿಗೆ ಆಂದೋಲನಕ್ಕೆ ಕೆ.ಎಸ್.ಆರ್. ರೈಲು ನಿಲ್ದಾಣದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಎಪಿಎಂಸಿ ಕಾಯ್ದೆಯಲ್ಲಿನ ನ್ಯೂನತೆಯನ್ನು ಪರಿಪಡಿಸುವುದು ಬೇರೆ. ಆದರೆ ಖಾಸಗೀಕರಣ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ದಿನೇಶ್ ಗಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಯು.ಟಿ.ಖಾದರ್ ಮೊದಲಾದವರು ಪಾಲ್ಗೊಂಡಿದ್ದಾರೆ.

ರ್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದಾರೆ.

ರ್ಯಾಲಿಯ ಹಿನ್ನೆಲೆಯಲ್ಲಿ ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News