ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ನೇಮಕ

Update: 2021-01-20 11:55 GMT

ಬೆಂಗಳೂರು, ಜ.20: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಹಾಲಿ ಇರುವ ಮೂವರು ಕಾರ್ಯಾಧ್ಯಕ್ಷರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಲ್ಲಿ ಈಗಾಗಲೇ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಮ್ ಅಹ್ಮದ್ ಕಾರ್ಯಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದು, ಇದೀಗ ಹೊಸದಾಗಿ ಇಬ್ಬರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಇದೇ ಮೊದಲ ಬಾರಿಗೆ ರಾಜ್ಯ ಕಾಂಗ್ರೆಸ್‍ನಲ್ಲಿ ಐವರು ಕಾರ್ಯಾಧ್ಯಕ್ಷರ ನೇಮಕವಾದಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News