ಜ.21ರಂದು ಉಡುಪಿಗೆ ಸಚಿವ ಡಾ.ಸುಧಾಕರ್

Update: 2021-01-20 13:47 GMT

ಉಡುಪಿ, ಜ.20: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಜ.21ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಗುರುವಾರ ಮಂಗಳೂರಿನಿಂದ ಅಪರಾಹ್ನ 3  ಗಂಟೆಗೆ ಉಡುಪಿಗೆ ಆಗಮಿಸುವ ಸಚಿವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದು, ಬಳಿಕ ಸಂಜೆ 5 ಕ್ಕೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಬೆ ನಡೆಸುವರು. ರಾತ್ರಿ 7 ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ನಂತರ ಮಂಗಳೂರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News