ಜ.22ರಂದು ಹೆಬ್ರಿಯಲ್ಲಿ ಉದ್ಯೋಗ ಮೇಳ

Update: 2021-01-20 13:50 GMT

ಉಡುಪಿ, ಜ.20: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವೊಂದು ಜ. 22ರಂದು ಬೆಳಗ್ಗೆ 9:30ರಿಂದ ಸಂಜೆ 4:00 ಗಂಟೆಯವರೆಗೆ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದ ಅಂಗವಾಗಿ ಉಚಿತ ಉದ್ಯಮಶೀಲತಾ ಕೌಶಲ್ಯ ತರಬೇತಿ, ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನ ತರಬೇತಿ ಹಾಗೂ ಕೌಶಲ್ಯ ನೋಂದಣಿ ಬಗ್ಗೆ ಕಾರ್ಯಾಗಾರವು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಉದ್ಯೋಗ ಮೇಳ ನಡೆಯುವ ಸ್ಥಳದಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಆಸಕ್ತಿ ಇರುವ ಎಸೆಸೆಲ್ಸಿ/ ಪಿಯುಸಿ/ ಯಾವುದೇ ಪದವಿ /ಡಿಪ್ಲೋಮ/ಐಟಿಐ /ಸ್ನಾತಕೋತ್ತರ ಹಾಗೂ ಖಾಸಗಿ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ /ರೆಸ್ಯೂಮ್ (ಬಯೋಡೇಟಾ), ಆಧಾರ್ ಕಾರ್ಡು ಇತ್ಯಾದಿ ದಾಖಲೆ ಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ವಿವಿಕಂಪೆನಿ/ಸಂಸ್ಥೆಗಳುಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಆಸಕ್ತಿ ಇರುವ ಎಸೆಸೆಲ್ಸಿ/ ಪಿಯುಸಿ/ ಯಾವುದೇ ಪದವಿ /ಡಿಪ್ಲೋಮ/ಐಟಿಐ /ಸ್ನಾತಕೋತ್ತರ ಹಾಗೂ ಖಾಸಗಿ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅ್ಯರ್ಥಿಗಳುವಿದ್ಯಾರ್ಹತೆಅಂಕಪಟ್ಟಿ/ರೆಸ್ಯೂಮ್(ಬಯೋಡೇಟಾ),ಆಾರ್ ಕಾರ್ಡು ಇತ್ಯಾದಿ ದಾಖಲೆ ಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News