ನಿಟ್ಟೆ : ಜ.22ರಂದು ದಂತ ತಪಾಸಣೆ, ಚಿಕಿತ್ಸಾ ಶಿಬಿರ
Update: 2021-01-20 19:30 IST
ಉಡುಪಿ, ಜ.20: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಆರೋಗ್ಯ ಕಾರ್ಯಕ್ರಮದ ಅಂಗವಾಗಿ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಜ.22ರಂದು ಬೆಳಗ್ಗೆ 10 ರಿಂದ ಅಪರಾಹ್ನ 1 ಗಂಟೆಯವರೆಗೆ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ದಂತ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.