ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2021-01-20 14:19 GMT

ಪಡುಬಿದ್ರಿ, ಜ.20: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ ಹಾಗೂ ಎಸ್‌ಬಿವಿಪಿ ಹಿ.ಪ್ರಾ.ಶಾಲೆ ಪಡುಬಿದ್ರಿ ಗಣಪತಿ ಪ್ರೌಢ ಶಾಲೆ ಮತ್ತು ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಜ.29ರಂದು ಪಡುಬಿದ್ರಿ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪ್ರಾಂಗಣದಲ್ಲಿ ಹಿರಿಯ ರಂಗಕರ್ಮಿ, ನಿರ್ದೇಶಕ, ಸಾಹಿತಿ ಡಾ. ಭರತ್ ಕುಮಾರ್ ಪೊಲಿಪು ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾಪು ತಾಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಶಾಲಾ ಸಭಾಂಗಣದಲ್ಲಿ ಜರುಗಿತು.

ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭರತ್ ಕುಮಾರ್ ಆಯ್ಕೆಗೆ ಜಿಲ್ಲಾ ಹಾಗೂ ಮುಂಬಯಿ ಸಾಹಿತ್ಯ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ವಹಿಸಿದ್ದರು. ಸಮ್ಮೇಳನದ ಕಾರ್ಯಾಧ್ಯಕ್ಷ ಅನಂತ ಪಟ್ಟಾಭಿ ರಾವ್ ಪ್ರಸ್ತಾವಿ ಮಾತುಗಳೊಂದಿಗೆ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೆ.ಗಣಪತಿ ಭಟ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಸುಮತಿ ವಿ.ಹೆಗಡೆ, ಕಸಾಪ ಕಾಪು ತಾಲೂಕು ಘಟಕದ ಗೌರವ ಕಾರ್ಯದರ್ಶಿ ವಿದ್ಯಾಧರ್ ಪುರಾಣಿಕ್, ಸದಸ್ಯೆ ಸುದಕ್ಷಿಣೆ, ಸುಧಾಕರ್ ಪೂಜಾರಿ ಮೂಡುಬೆಳ್ಳೆ, ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಶಿಕ್ಷಕರಾದ ಕೆ.ಅಶೋಕ್, ಭಾರತಿ ಪಿ. ಆಚಾರ್ಯ, ನಮಿತಾ ಜೆ, ಸಂಗೀತಾ, ಮಾಲತಿ, ಚಿತ್ರಕಲಾ, ತರಂಗಿಣಿ ಮಿತ್ರಮಂಡಳಿಯ ಶ್ರೀನಿವಾಸ ಭಾಗವತ್ ಉಪಸ್ಥಿತರಿದ್ದರು. ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಕಸ್ತೂರಿ ರಾಮಚಂದ್ರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News