ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Update: 2021-01-20 15:29 GMT

ಮಂಗಳೂರು, ಜ.20: ದ.ಕ. ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಗಳನ್ನು ಮಾರ್ಚ್ ಅಂತ್ಯದೊಳಗೆ ಸಂಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಅಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರಸ್ತುತ ಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನು ಮಾರ್ಚ್ ಎರಡನೇ ವಾರದೊಳಗಾಗಿ ಪೂರ್ಣಗೊಳಿಸ ಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟಾರೆ 94 ಕಾಮಗಾರಿಗಳನ್ನು 8.07 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಮಾಡಿದ ಅನುದಾನವನ್ನು ಯಾವುದೇ ಕಾರಣಕ್ಕೂ ವ್ಯರ್ಥವಾಗದಂತೆ ಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮಂಡಳಿ ಸದಸ್ಯ ರಾಮ ಅಮಿನ್ ಪಚ್ಚಾಡಿ ಹಾಗೂ ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಗ್ರಾಮೀಣಾಭಿವೃದ್ಧಿ, ಮಹಾನಗರ ಪಾಲಿಕೆ ಅಭಿಯಂತರು ಮಂಗಳೂರು ಹಾಗೂ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಹಾಗೂ ಜಿಲ್ಲಾ ಮಟ್ಟ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News