ಜ. 22: ‘ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ’ ವಿಶೇಷ ಆಂದೋಲನಕ್ಕೆ ಚಾಲನೆ

Update: 2021-01-21 08:47 GMT

ಮಂಗಳೂರು, ಜ.20: ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಷನ್’ (ಗ್ರಾ) ಯೋಜನೆಯಡಿ ಪ್ರತಿ ಯೊಂದು ಗ್ರಾಮವನ್ನು ತ್ಯಾಜ್ಯ ಮುಕ್ತವನ್ನಾಗಿಸಲು ‘ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ’ ವಿಶೇಷ ಜಿಲ್ಲಾ ಆಂದೋಲನಕ್ಕೆ ಜ.22ರಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಪಂನ ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ಸಿಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ’ ವಿಶೇಷ ಜಿಲ್ಲಾ ಆಂದೋಲನಕ್ಕೆ ಚಾಲನೆ ನೀಡಲಿ ದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಪ್ರಚಾರ ವಾಹನಕ್ಕೆ ಚಾಲನೆ ನೀಡಲಿದ್ದಾರೆ. ನೂತನ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ.

ಪೋಸ್ಟರ್‌ನ್ನು ಜಿಪಂ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಬಿಡುಗಡೆ ಮಾಡಲಿದ್ದಾರೆ. ಹಸಿಕಸ, ಒಣಕಸ ಸಂಗ್ರಹಣೆಯ ಬಕೆಟ್‌ನ್ನು ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ವಿತರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನ ಸಭಾಕ್ಷೇತ್ರದ ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News