ಮಂಗಳೂರು: ಉದ್ಯಮಿ ಆತ್ಮಹತ್ಯೆ

Update: 2021-01-20 17:47 GMT

ಮಂಗಳೂರು, ಜ. 20: ನಗರದ ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವುದು ಬುಧವಾರ ಬೆಳಕಿಗೆ ಬಂದಿದೆ.
ಉದ್ಯಮಿ ಚಂದ್ರಶೇಖರ್ ಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಗುರುಪುರದ ನಿವಾಸಿಯಾಗಿದ್ದ ಚಂದ್ರಶೇಖರ್ ಹಂಪನಕಟ್ಟೆಯಲ್ಲಿ ಕಚೇರಿ ಹೊಂದಿದ್ದು, ಇಂದು ಸಂಜೆಯ ವೇಳೆಗೆ ಕಚೇರಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭ ಸ್ಥಳೀಯ ಅಂಗಡಿಯವರು ಅವರ ಕಚೇರಿಗೆ ಆಗಮಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಂಗಳೂರು ಉತ್ತರ (ಬಂದರ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News