ದ.ಕ.ಜಿಲ್ಲೆ : 16 ಮಂದಿಗೆ ಕೋವಿಡ್ ದೃಢ
Update: 2021-01-20 17:39 GMT
ಮಂಗಳೂರು, ಜ.20: ದ.ಕ. ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 16 ಮಂದಿಗೆ ಕೊರೋನ ಸೋಂಕು ತಗುಲಿದ್ದು, 42 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,479 ಸೋಂಕಿತರ ಪೈಕಿ 32,500 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 737 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 242 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 25,850 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 27,15,515 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.