×
Ad

ಮಂಗಳೂರು ಏರ್‌ಪೋರ್ಟ್‌ನಲ್ಲಿ ಚಿನ್ನ ಅಕ್ರಮ ಸಾಗಾಟ: ಆರೋಪಿ ಸೆರೆ, ಸೊತ್ತು ವಶ

Update: 2021-01-21 16:12 IST

ಮಂಗಳೂರು, ಜ. 21: ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಮೂಲತಃ ಮಡಿಕೇರಿಯ ಉಬೈದ್ ಬಂಧಿತ ಆರೋಪಿ.

ಈತ ಗುರುವಾರ ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ತಪಾಸಣೆ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ, ಈತನ ಬಳಿ 44.2 ಲಕ್ಷ ರೂ. ಮೌಲ್ಯದ 800 ಗ್ರಾಂ ಚಿನ್ನವಿದ್ದು, ಅನುಮಾನ ಬಾರದ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News