ಜ. 23,24ಕ್ಕೆ ಎಫ್‌ಡಿಎ, ಎಸ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ

Update: 2021-01-21 13:40 GMT

ಉಡುಪಿ, ಜ.21: ಜಿಲ್ಲೆಯಲ್ಲಿ ಜನವರಿ 23ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಪಿಜಿ ಸೆಂಟರ್‌ನಲ್ಲಿ ಹಾಗೂ ಜ.24ರಂದು ವಿವಿಧ ಇಲಾಖೆ ಗಳಲ್ಲಿ ಖಾಲಿ ಇರುವ ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹಾಗೂ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಯು ಉಡುಪಿ ಪೂರ್ಣಪ್ರಜ್ಞ ಕಾಲೇಜು, ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಪೂರ್ಣಪ್ರಜ್ಞ ಪಿಯು ಕಾಲೇಜು, ಮಣಿಪಾಲ ಪದವಿ ಪೂರ್ವ ಕಾಲೇಜು, ಉಡುಪಿ ಸರಕಾರಿ ಪಿ.ಯು ಕಾಲೇಜು, ಕುಂಜಿಬೆಟ್ಟು ಟಿ.ಎ. ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಕಡಿಯಾಳಿ ಯು. ಕಮಲಾಬಾಯಿ ಹೈಸ್ಕೂಲ್, ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್, ಉಡುಪಿಯ ಸೈಂಟ್ ಸಿಸಿಲಿ ಹೈಸ್ಕೂಲ್ ಹಾಗೂ ಒಳಕಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಜರಿರ ಬೇಕು. ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ಪೋನ್ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News