​ಉಡುಪಿ : ಇಂದು ಜಿಲ್ಲೆಯ ಏಳು ಮಂದಿಗೆ ಸೋಂಕು

Update: 2021-01-21 13:49 GMT

ಉಡುಪಿ, ಜ.21: ಗುರುವಾರ ಸಹ ಉಡುಪಿ ಜಿಲ್ಲೆಯ ಏಳು ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ 10ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 27ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರು ಹಾಗೂ ಮೂವರು ಮಹಿಳೆಯರು. ಇವರಲ್ಲಿ ಇಬ್ಬರು ಉಡುಪಿ ತಾಲೂಕಿನ ವರಾದರೆ ಉಳಿದ ಐದು ಮಂದಿ ಕುಂದಾಪುರ ತಾಲೂಕಿನವರು. ಸೋಂಕಿತರಲ್ಲಿ ನಾಲ್ವರು ಹೋಮ್ ಐಸೋಲೇಷನ್‌ನಲ್ಲಿ ಹಾಗೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಬುಧವಾರ 10 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಮುಕ್ತಿ ಪಡೆದವರ ಒಟ್ಟು ಸಂಖ್ಯೆ ಈಗ 23,025ಕ್ಕೇರಿದೆ.

1188 ಮಂದಿ ನೆಗೆಟಿವ್: ಬುಧವಾರ ಜಿಲ್ಲೆಯ 1195 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1188 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಏಳು ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,241 ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,26,023 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,02,782 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಕೋವಿಡ್‌ಗೆ ಮೃತರ ಸಂಖ್ಯೆ 189 ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News