ಉಡುಪಿ: ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

Update: 2021-01-21 14:27 GMT

ಉಡುಪಿ, ಜ.21: ಈ ಬಾರಿ ಜ.26ರಂದು ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು. ನಿನ್ನೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹರಕ್ಷಕ, ಅಬಕಾರಿ ಹಾಗೂ ಕರಾವಳಿ ಪೊಲೀಸ್‌ ನಿಂದ ಆಕರ್ಷಕ ಪಥ ಸಂಚಲನ ಏರ್ಪಡಿಸಿ, ಕ್ರೀಡಾಂಗಣ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ವಿತರಿಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಕಾರ್ಯಕ್ರಮದ ಯಶಸ್ಸಿ ಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿ, ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಜವಾಬ್ದಾರಿ ಹಂಚಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿ, ಆಯ್ಕೆ ಗೊಂಡಿರುವ ರೈತರನ್ನು ಸನ್ಮಾನಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಅರ್ಹರನ್ನು ಗುರುತಿಸಿ ಶೀಘ್ರದಲ್ಲಿ ಅವರ ಪಟ್ಟಿ ನೀಡು ವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೆಶಕ ಎನ್.ಹೆಚ್. ನಾಗೂರ, ನಗರಸಭಾ ಆಯುಕ್ತ ಉದಯ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News