×
Ad

ಕ್ರೀಡಾ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2021-01-21 19:59 IST

ಉಡುಪಿ, ಜ.21: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಕ್ರೀಡಾ ಪ್ರೋತ್ಸಾಹ ಧನಕ್ಕೆ 2020ನೇ ವರ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದ ವೈಯಕ್ತಿಕ/ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ /ಪದಕ ಪಡೆದ ಕ್ರೀಡಾಪಟುಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ: 0820- 2521324, 9480886467ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News