ಜಲಜೀವನ್ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸೂಚನೆ: ಉಡುಪಿ ಜಿಪಂ ಮಾಸಿಕ ಕೆಡಿಪಿ ಸಭೆ

Update: 2021-01-21 14:59 GMT

ಉಡುಪಿ, ಜ.21: ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾ ಗುತ್ತಿರುವ ಕಾಮಗಾರಿಗಳ ಕುರಿತಂತೆ ಸ್ಥಳೀಯ ಜನ ಪ್ರತಿನಿಧಿಗಳಿಗೆ ಹಾಗೂ ಗ್ರಾಮದ ಜನತೆಯೊಂದಿಗೆ ಚರ್ಚಿಸಿ ಸಮಗ್ರ ಮಾಹಿತಿಗಳನ್ನು ನೀಡಿ. ಇದರಿಂದ ಕಾಮಗಾರಿಯ ಸಂಪೂರ್ಣ ಪ್ರಯೋಜನ ಸಾರ್ವಜನಿಕರಿಗೆ ದೊರೆಯಲಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಗ್ರಾಮಗಳಲ್ಲಿ ಸ್ಥಳೀಯ ಜಲ ಮೂಲಗಳನ್ನು ಗುರುತಿಸಲು ಗ್ರಾಮಸ್ಥರ ಮತ್ತು ಜನಪ್ರತಿನಿಧಿಗಳ ನೆರವು ಅಗತ್ಯವಿದ್ದು, ಯಾವ ಕಾಮಗಾರಿಗಳ ತುರ್ತು ಅಗತ್ಯವಿದೆ ಎಂಬುದನ್ನು ತಿಳಿದು ಅಂತಹ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಅಧ್ಯಕ್ಷ ದಿನಕರಬಾಬು ಸೂಚಿಸಿದರು.

ಕಾಮಗಾರಿ ಆರಂಕ್ಕೆ ಮುನ್ನ ಸ್ಥಳೀಯವಾಗಿ ಸಭೆ ಕರೆದು ಅಭಿಪ್ರಾಯಗಳನ್ನು ಸಂಗ್ರಹಿಸಿ. ಯೋಜನೆಯನ್ನು ಅತ್ಯಂತ ಪಾರದರ್ಶ ಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ‌ಗಳಿಗೆ ಅವರು ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುವಿಗಳ ಆಯ್ಕೆ ಮಾನದಂಡದಲ್ಲಿ ಆದಾಯ ಮಿತಿಯನ್ನು ವಸತಿ ನಿಗಮದಿಂದ 32,000 ರೂ.ಗಳಿಗೆ ನಿಗದಿ ಪಡಿಸಿದೆ. ಬಿಪಿಎಲ್ ಕಾರ್ಡ್ ಹೊಂದಲು ಆದಾಯಮಿತಿ 1,20,000ರೂ. ಇದೆ. ಇದರಿಂದ 32,000ರೂ.ಗಿಂತ ಅಧಿಕ ಆದಾಯ ಹೊಂದಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುವಿಗಳಿಗೆ ವಸತಿ ಸೌಲ್ಯ ಕಲ್ಪಿಸಲು ಅಸಾಧ್ಯವಾಗಿದೆ. ಅದ್ದರಿಂದ 32,000ರೂ.ಗಿಂತ ಹೆಚ್ಚು ಆದಾಯವಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿ ರುವ ಫಲಾನುಭವಿಗೆ ವಸತಿ ಯೋಜನೆ ಪಡೆಯಲು ಆದಾಯಮಿತಿಯನ್ನು ಕಡಿಮೆ ಮಾಡುವ ಕುರಿತಂತೆ ರಾಜೀವ್ ಗಾಂಧೀ ವಸತಿ ನಿಗಮಕ್ಕೆ ಪತ್ರ ಬರೆಯುವಂತೆ ದಿನಕರ ಬಾಬು ತಿಳಿಸಿದರು.

ವಸತಿ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಪಡೆದು ಕೊಳ್ಳುವುದರಿಂದ ದಾಖಲೆಗಳ ಕೊರತೆ ಯಿಂದ ಅನಗತ್ಯವಾಗಿ ಮನೆಗಳು ಬ್ಲಾಕ್ ಆಗುವುದು ತಪ್ಪಿ ಸಕಾಲದಲ್ಲಿ ಫಲಾನುಭವಿಗೆ ಯೋಜನೆಯ ಪ್ರಯೋಜನ ದೊರೆಯಲಿದೆ. ಈ ಬಗ್ಗೆ ಅಧಿಕಾರಿ ಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಹಾಗೂ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ತಿಳಿಸಿದರು.

ಕೋವಿಡ್ ಲಸಿಕೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿ 22,230 ಮಂದಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲು ಗುರಿ ಹೊಂದಿದ್ದು, ಇದುವರೆಗೆ ಶೇ.60 ಸಾಧನೆ ಆಗಿದೆ. 5 ದಿನದಲ್ಲಿ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಡಿಹೆಚ್‌ಓ. ಡಾ.ಸುದೀರ್‌ಚಂದ್ರ ಸೂಡಾ ತಿಳಿಸಿದರು.

ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಮನೆಗಳಿಂದ ಹಸಿ ಕಸ ಸಂಗ್ರಹಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, ವಾರದಲ್ಲಿ ಒಂದು ದಿನ ಒಣ ಕಸ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News