ಕಸದ ತೊಟ್ಟಿಯಲ್ಲಿ ಹೆಣ್ಣು ಮಗು ಪತ್ತೆ
Update: 2021-01-21 20:40 IST
ಉಡುಪಿ, ಜ.21: ಉಡುಪಿ ನಗರಸಭೆ ವ್ಯಾಪ್ತಿಯ ಕಸದ ತೊಟ್ಟಿಯಲ್ಲಿ ಆಗಸ್ಟ್ 10ರಂದು ಅಷ್ಟಮಿ ಎಂಬ ಮೂರು ತಿಂಗಳ ಹೆಣ್ಣು ಮಗು ಪತ್ತೆಯಾಗಿತ್ತು.
ಮಗುವಿಗೆ 'ಕೃಷ್ಣಾನುಗ್ರಹ ದತ್ತು ಸಂಸ್ಥೆ'ಯಲ್ಲಿ ಪುನರ್ವಸತಿ ಕಲ್ಪಿಸಲಾಗಿದ್ದು, ಮಗುವಿನ ಪೋಷಕರು ಯಾರಾದರೂ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ದೂ.ಸಂಖ್ಯೆ: 0820-2574964ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.