ರಾಜ್ಯದಲ್ಲಿ 674 ಕೊರೋನ ಪ್ರಕರಣಗಳು ಪಾಸಿಟಿವ್: ಇಬ್ಬರು ಸೋಂಕಿತರು ಮೃತ್ಯು

Update: 2021-01-21 16:11 GMT

ಬೆಂಗಳೂರು, ಜ.21: ರಾಜ್ಯದಲ್ಲಿ ಗುರುವಾರ 674 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 815 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,34,252ಕ್ಕೆ ತಲುಪಿದ್ದು, 171 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,187ಕ್ಕೆ ತಲುಪಿದ್ದು, ಅನ್ಯ ಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 7,554ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರು ಬಲಿ: ಬೆಂಗಳೂರು ನಗರ 1, ಧಾರವಾಡದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 674 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 7, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 371, ಬೀದರ್ 2, ಚಾಮರಾಜನಗರ 1, ಚಿಕ್ಕಬಳ್ಳಾಪುರ 18, ಚಿಕ್ಕಮಗಳೂರು 5, ಚಿತ್ರದುರ್ಗ 6, ದಕ್ಷಿಣ ಕನ್ನಡ 39, ದಾವಣಗೆರೆ 7, ಧಾರವಾಡ 9, ಗದಗ 1, ಹಾಸನ 16, ಹಾವೇರಿ 3, ಕಲಬುರಗಿ 40, ಕೊಡಗು 5, ಕೋಲಾರ 10, ಕೊಪ್ಪಳ 1, ಮಂಡ್ಯ 6, ಮೈಸೂರು 35, ರಾಯಚೂರು 1, ರಾಮನಗರ 2, ಶಿವಮೊಗ್ಗ 17, ತುಮಕೂರು 26, ಉಡುಪಿ 7, ಉತ್ತರ ಕನ್ನಡ 8, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 371 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಗುರುವಾರದಂದು 371 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 509 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 3,96,140 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,373 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,86,769 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News