'ಕೆಎಸ್‌ಆರ್‌ಟಿಸಿ ಸ್ತ್ರೀ ಶೌಚಾಲಯ' ವೀಕ್ಷಿಸಿದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ

Update: 2021-01-21 16:55 GMT

ಬೆಂಗಳೂರು, ಜ. 21: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಅವರು ಇಲ್ಲಿನ ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಗಮವು ಅನುಷ್ಠಾನಗೊಳಿಸಿರುವ ಮಹಿಳೆಯರ ಶೌಚಾಲಯವನ್ನು ವೀಕ್ಷಿಸಿ, ಅದರ ಅನುಷ್ಠಾನ, ಬಳಕೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಗುರುವಾರ ಇಲ್ಲಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಶೃತಿ ಅವರಿಗೆ ಕರ್ನಾಟಕ ರಾಜ್ಯರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಟಿ.ಎಸ್.ಲತಾ ಅವರು, ಸ್ತ್ರೀ ಶೌಚಾಲಯ ನಿರ್ಮಿಸಿರುವುದರಿಂದ ಮಹಿಳೆಯರಿಗೆ ಆಗುತ್ತಿರುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.

‘ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಮಹಿಳೆಯರಿಗೆ ಶೌಚಾಲಯಗಳ ಅವಶ್ಯಕತೆ ಇದ್ದು, ಇದೇ ಮಾದರಿಯಲ್ಲಿ ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಈ ರೀತಿಯ ಶೌಚಾಲಯಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅನುಷ್ಠಾನಕ್ಕೆ ತರಬೇಕು' ಎಂದು ಶ್ರುತಿ ಇದೇ ವೇಳೆ ಸಲಹೆ ನೀಡಿದರು.

ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕಾರ್ಯಾಗಾರದಲ್ಲಿಯೇ ನಿರ್ಮಿಸಿರುವ ಮಹಿಳೆಯರ ಶೌಚಾಲಯವನ್ನು ದಾವಣಗೆರೆ ಬಸ್ ನಿಲ್ದಾಣದಲ್ಲಿ ನಾಲ್ಕೈದು ದಿನದ ಹಿಂದಷ್ಟೇ ಸಾರ್ವಜನಿಕ ಬಳಕೆಗೆ ಸ್ತ್ರೀ ಶೌಚಾಲಯವನ್ನು ಒದಗಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News