ಶಶಿಕಲಾಗೆ ಕೊರೋನ ಸೋಂಕು ಪಾಸಿಟಿವ್: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Update: 2021-01-21 17:23 GMT

ಬೆಂಗಳೂರು,ಜ.21: ಅನಾರೋಗ್ಯ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಿಂದ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

63 ವರ್ಷದ ಶಶಿಕಲಾ ಅವರಿಗೆ ಬುಧವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಪಡೆದ ಬಳಿಕ ಗುರುವಾರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಇದರ ಬೆನ್ನಲ್ಲೇ ಅವರಿಗೆ ಕೊರೋನ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಜ. 27ರಂದು ಜೈಲಿನಿಂದ ಬಿಡುಗಡೆ‌ಯಾಗಲಿದ್ದಾರೆ. ಭದ್ರತಾ ದೃಷ್ಟಿಯಿಂದ ಜೈಲು ಸಿಬ್ಬಂದಿ ಜೊತೆ ಸ್ಥಳೀಯ ಪೊಲೀಸರು ಆಸ್ಪತ್ರೆ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News