ಉಳ್ಳಾಲ, ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಪ್ರಕರಣ: ಐವರು ಆರೋಪಿಗಳ ಬಂಧನ

Update: 2021-01-22 08:47 GMT

ಕೊಣಾಜೆ, ಜ.22: ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ನರಿಂಗಾನದ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್ (40) ಮತ್ತು ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದಿನ್(34) ಎಂಬವರನ್ನು ಕುತ್ತಾರಿನಲ್ಲಿ ಸಿಸಿಬಿ ತಂಡ ಬಂಧಿಸಿದೆ. ಬಂಧಿತರಿಂದ 23.980 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣ ಮೂಲದ ವಿಠಲ್ ಚೌಹಾನ್ ಮತ್ತು ಬೀದರ್ ನಿವಾಸಿಗಳಾದ ಸಂಜೀವ್ ಕುಮಾರ್, ಕಲ್ಲಪ್ಪ ಬಂಧಿತ ಆರೋಪಿಗಳು. ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 15 ಕೆ.ಜಿ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ . ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News