ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಭದ್ರತೆ: ಡಾ.ಅನಿಲ್ ಥಾಮಸ್

Update: 2021-01-22 12:37 GMT

ಉಡುಪಿ, ಜ.22: ಬಿಜೆಪಿ ಆಡಳಿತ ನಡೆಸುವ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯ ನಿರ್ಭೀತಿಯಿಂದ ಬದುಕುವಂತಾಗಿದ್ದು, ಸಮುದಾಯ ಭದ್ರತೆ ಹಾಗೂ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಥಾಮಸ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಇತ್ತೀಚೆಗೆ ಭೇಟಿ ನೀಡಿದ ಸಂದಭದರ್ಲ್ಲಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಅಲ್ಪಸಂಖ್ಯಾತ ಮೋರ್ಚ ಕಾರ್ಯದರ್ಶಿ ಸಲೀಂ ಅಂಬಾಗಿಲು ಮಾತನಾಡಿ ದರು. ಇದೇ ಸಂಧರ್ಭದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಪಂ ಸದಸ್ಯರನ್ನು ಅಭಿನಂದಿಸಲಾಯಿತು. ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.

ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆಸೀಫ್ ಕಟಪಾಡಿ, ಆಲ್ವಿನ್, ಉಪಾಧ್ಯಕ್ಷ ಅಪ್ಸರ್, ಕಾರ್ಯದರ್ಶಿ ಗ್ರೆಟ್ಟಾ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಮೈಕೆಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಗರ ಮೋರ್ಚ ಅಧ್ಯಕ್ಷ ಜುನೈದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News