ಬೈಂದೂರು ತಾಲೂಕಿನ 15 ಗ್ರಾಪಂಗಳಿಗೆ ಮೀಸಲಾತಿ ಪ್ರಕಟ

Update: 2021-01-22 12:43 GMT

ಉಡುಪಿ, ಜ.22: ಜಿಲ್ಲೆಯ ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಗುರುವಾರ ಮೀಸಲಿರಿಸಿ ಹಂಚಿಕೆ ಮಾಡಲಾಗಿದ್ದು, 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ ಹೀಗಿದೆ.

ಶಿರೂರು: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಉಪ್ಪುಂದ: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಬಿಜೂರು: ಅಧ್ಯಕ್ಷ-ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕೆರ್ಗಾಲು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕೊಲ್ಲೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ, ಜಡ್ಕಲ್: ಅಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಗೋಳಿಹೊೆ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಕಾಲ್ತೋಡು: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ.

ಕಂಬದಕೋಣೆ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, ಕಿರಿಮಂಜೇಶ್ವರ: ಅಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ನಾವುಂದ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಹೇರೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಮರವಂತೆ: ಅಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ನಾಡ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಹಳ್ಳಿಹೊಳೆ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ- ಸಾಮಾನ್ಯಕ್ಕೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News