ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Update: 2021-01-22 12:46 GMT

ಉಡುಪಿ, ಜ.22: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ ಸಾಲಿನ ಪರಿಶಿಷ್ಟಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟು ಗಳಿಗೆ ನೊಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀುವ ಯೋಜನೆಯನ್ನು ಜಾರಿಗೆ ತಂದಿದೆ.

ಕಳೆದ ಮೂರು ಶೈಕ್ಷಣಿಕ ವರ್ಷದಲ್ಲಿ ಅಧಿಕೃತ ಅಂತಾರಾಷ್ಟ್ರೀಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ ಅಂತರ್‌ರಾಜ್ಯ / ಅಂತರ್‌ವಿಶ್ವವಿದ್ಯಾಲಯ/ರಾಜ್ಯಮಟ್ಟದ ಶಾಲಾಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರುವ ಕ್ರೀಡಾಪಟುಗಳಿಗೆ (ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಹಾಗೂ ಸಹಾಯಧನ ಪಡೆಯಲುಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ತಮ್ಮ ಕ್ರೀಡಾ ದಾಖಲೆ/ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಫೆ.2 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, 9480886467ನ್ನು ಸಂಪರ್ಕಿ ಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News