86ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ

Update: 2021-01-22 13:03 GMT

ಬೆಂಗಳೂರು, ಜ.22: ಹಾವೇರಿಯಲ್ಲಿ ನಡೆಯಲಿರುವ 86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ಕಾರ್ಯಕಾರಿ ಸಮಿತಿಯು ದೊಡ್ಡರಂಗೇಗೌಡ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಹಿರಿಯ ಲೇಖಕರಾದ ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ, ಎಸ್.ಆರ್.ಗುಂಜಾಳ್, ಕೆ.ಎಸ್.ಭಗವಾನ್ ಸೇರಿದಂತೆ ವಿವಿಧ ಸಾಹಿತಿಗಳ ಹೆಸರು ಚರ್ಚೆಗೆ ಬಂದಿದ್ದವು. ಅಂತಿಮವಾಗಿ ದೊಡ್ಡರಂಗೇಗೌಡ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಕೋವಿಡ್-19 ಸೋಂಕಿನ ನಿರ್ಬಂಧಗಳನ್ನು ಸಡಿಲಿಸಿ, ಅವಕಾಶ ನೀಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮನು ಬಳಿಗಾರ್ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News