ಸ್ಫರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

Update: 2021-01-22 14:49 GMT

ಉಡುಪಿ, ಜ.22: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಜ.23ರಂದು ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ಜ.24ರಂದು ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯ ಸಿವಿಲ್ ಸೇವೆ ಯಡಿಯ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ವೆಂದು ಘೋಷಿಸಿ, ಜ.23 ಹಾಗೂ 24ರಂದು ಬೆಳಗ್ಗೆ 8 ಗಂಟೆ ಯಿಂದ ಸಂಜೆ 6 ರ ವರೆಗೆ ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News