ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ
Update: 2021-01-22 20:28 IST
ಉಡುಪಿ, ಜ.22: ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಚುನಾವಣಾಧಿ ಕಾರಿಗಳ ಸಹಯೋಗದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯು ಜ.25ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತುತಿ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್.ಸುಬ್ರಹ್ಮಣ್ಯ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಜಿ. ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.