ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ
Update: 2021-01-22 20:28 IST
ಉಡುಪಿ, ಜ. 22: ರಾಜ್ಯ ಸರಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪಟ್ಟಣ ಪಂಚಾಯತ್‌ನಿಂದ ನೇಮಕವಾದ ಸಮೀಕ್ಷಾದಾರರು ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.