ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2021-01-22 15:27 GMT

ಕುಂದಾಪುರ, ಜ.22: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಅಸೋಡು ಗ್ರಾಮದ ಪಾರ್ವತಿ(55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.21ರಂದು ಬೆಳಗ್ಗೆ ಮನೆಯ ಹೊರಗಡೆ ಇರುವ ಬಾವಿಯ ದಂಡಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮಾಸೆಬೈಲು: ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಜ.20 ರಂದು ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಮಾಸೆಬೈಲು ಗ್ರಾಮದ ಕೆಲ ಸಾಲಿಮಕ್ಕಿ ನಿವಾಸಿ ಸಣ್ಣಕ್ಕ ಪೂಜಾರ್ತಿ ಎಂಬವರು ಜ.21ರಂದು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News