ಗಣರಾಜ್ಯೋತ್ಸವ: ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿದ ರಾಜ್ಯ ಸರಕಾರ

Update: 2021-01-22 15:39 GMT

ಬೆಂಗಳೂರು, ಜ.22: ಗಣರಾಜ್ಯೋತ್ಸವ ದಿನಾಚರಣೆಯ(ಜ.26) ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಉಪಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಧ್ವಜಾರೋಹಣ ಮಾಡಲು ರಾಜ್ಯ ಸರಕಾರ ನೇಮಿಸಿದೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ-ಬಾಗಲಕೋಟೆ, ಉಪ ಮುಖ್ಯಮಂತ್ರಿ-ಡಾ.ಅಶ್ವತ್ಥ ನಾರಾಯಣ, ಉಪ ಮುಖ್ಯಮಂತ್ರಿ-ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಕಂದಾಯ ಸಚಿವ ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ, ಬೃಹತ್ತ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್-ಧಾರವಾಡ.

ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು-ಚಿತ್ರದುರ್ಗ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್-ಚಾಮರಾಜನಗರ, ವಸತಿ ಸಚಿವ ವಿ.ಸೋಮಣ್ಣ-ಕೊಡಗು, ಗೃಹ ಸಚಿವ ಬಸವರಾಜ ಬೊಮ್ಮಾಯಿ-ಹಾವೇರಿ, ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ-ದಕ್ಷಿಣ ಕನ್ನಡ, ವೈದ್ಯಕೀಯ ಶಿಕ್ಷಣ ಸಚಿವ ಜೆ.ಸಿ.ಮಾಧುಸ್ವಾಮಿ-ತುಮಕೂರು.

ಸಣ್ಣ ಕೈಗಾರಿಕೆ ಸಚಿವ ಸಿ.ಸಿ.ಪಾಟೀಲ್-ಗದಗ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್-ಬೀದರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ-ವಿಜಯಪುರ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್-ಬಳ್ಳಾರಿ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ-ದಾವಣಗೆರೆ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್-ಮೈಸೂರು, ಕೃಷಿ ಸಚಿವ ಬಿ.ಸಿ.ಪಾಟೀಲ್-ಕೊಪ್ಪಳ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್-ಚಿಕ್ಕಬಳ್ಳಾಪುರ, ಯುವ ಸಬಲೀಕರಣ, ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ-ಮಂಡ್ಯ, ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್-ಉತ್ತರ ಕನ್ನಡ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ-ಬೆಳಗಾವಿ, ಅಬಕಾರಿ ಸಚಿವ ಕೆ.ಗೋಪಾಲಯ್ಯ-ಹಾಸನ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ-ಕಲಬುರಗಿ, ಅರಣ್ಯ ಸಚಿವ ಅರವಿಂದ ಲಿಂಬಾವಳಿ-ಚಿಕ್ಕಮಗಳೂರು, ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೇಶ್ವರ್-ಕೋಲಾರ, ಮೀನುಗಾರಿಕೆ ಸಚಿವ ಎಸ್.ಅಂಗಾರ-ಉಡುಪಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಯನ್ನು ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜ್ಯ ಶಿಷ್ಠಾಚಾರ)ಯ ಸರಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್ ನಯೀಮ್ ಮೋಮಿನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News