ರಾಜ್ಯದಲ್ಲಿಂದು 324 ಮಂದಿಗೆ ಕೊರೋನ ಸೋಂಕು ದೃಢ: ಮೂವರು ಸೋಂಕಿತರು ಸಾವು

Update: 2021-01-22 16:24 GMT

ಬೆಂಗಳೂರು, ಜ.22: ರಾಜ್ಯದಲ್ಲಿ ಶುಕ್ರವಾರ 324 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಈ ಪೈಕಿ ಮೂವರು ಸೋಂಕಿಗೆ ಬಲಿಯಾಗಿದ್ದು, 890 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,34,576ಕ್ಕೆ ತಲುಪಿದ್ದು, 165 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,190ಕ್ಕೆ ತಲುಪಿದ್ದು, ಅನ್ಯಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 6,985ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತುಆರೈಕೆಯಲ್ಲಿದ್ದಾರೆ.

ಮೂವರು ಬಲಿ: ಬೆಂಗಳೂರು ನಗರದಲ್ಲಿ ಇಬ್ಬರು, ದಕ್ಷಿಣ ಕನ್ನಡದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 324 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 3, ಬಳ್ಳಾರಿ 7, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 160, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 9, ಚಿತ್ರದುರ್ಗ 8, ದಕ್ಷಿಣಕನ್ನಡ 12, ದಾವಣಗೆರೆ 5, ಧಾರವಾಡ 2, ಗದಗ 4, ಹಾಸನ 6,  ಕಲಬುರಗಿ 9, ಕೊಡಗು 5, ಕೋಲಾರ 3,  ಮಂಡ್ಯ 3, ಮೈಸೂರು 19,  ರಾಮನಗರ 1, ಶಿವಮೊಗ್ಗ 1, ತುಮಕೂರು 18, ಉಡುಪಿ 3, ಉತ್ತರಕನ್ನಡ 3, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News